ಕರ್ನಾಟಕ

karnataka

ETV Bharat / state

ಬಂಡೆಪ್ಪ ಕಾಶೆಂಪೂರರನ್ನು ಸಚಿವ ಸ್ಥಾನದಿಂದ ಕೈ ಬಿಡಲಾಗುತ್ತದೆಯೇ? ಸಚಿವರೇನಂದರು? - undefined

ನಾನು ನನ್ನ ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ. ಪಕ್ಷ ನನಗೆ ಕೊಟ್ಟ ಕೆಲಸವನ್ನು ನಿರ್ವಹಿಸಿಕೊಂಡು ಬಂದಿದ್ದೇನೆ. ಉಳಿದಿದ್ದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು.

ಬಂಡೆಪ್ಪ ಕಾಶೆಂಪೂರ

By

Published : Jun 13, 2019, 8:07 PM IST

ಬೆಂಗಳೂರು:ಸಂಪುಟದಿಂದ ನನ್ನನ್ನು ಕೈ ಬಿಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ವಿಶ್ವನಾಥ್ ಅವರಿ​ಗೆ ಮಂತ್ರಿ ಪದವಿ ನೀಡುವ ವಿಚಾರವೂ ತಿಳಿದಿಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಂಡೆಪ್ಪ ಕಾಶೆಂಪೂರ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುತ್ತಾರೆ ಎಂಬುದರ ಬಗ್ಗೆಯೂ ನನಗೆ ಗೊತ್ತಿಲ್ಲ. ಎಚ್​.ವಿಶ್ವನಾಥ್ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಎಲ್ಲರೂ ಮನವಿ ಮಾಡಿದ್ದೇವೆ. ಈ ವಿಚಾರಗಳನ್ನು ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದ ಅವರು, ನಾಳೆ ಇಬ್ಬರು ಪಕ್ಷೇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.

For All Latest Updates

TAGGED:

ABOUT THE AUTHOR

...view details