ಕರ್ನಾಟಕ

karnataka

ETV Bharat / state

ನೀತಿ ಸಂಹಿತೆಯನ್ನ ಗಾಳಿಗೆ ತೂರಿದ್ರಾ ಗಿರಿ‌ನಗರ ಪೊಲೀಸರು..? - undefined

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೇರ್ ಮಾಡದ ಗಿರಿನಗರ ಪೊಲೀಸರು ರಾಜಕೀಯ ನಾಯಕರೊಂದಿಗೆ ಸೇರಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿಸಿದ್ದಾರೆ.

ಪೊಲೀಸ್ ಠಾಣೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

By

Published : May 10, 2019, 7:18 PM IST

ಬೆಂಗಳೂರು: ಕಾಂಗ್ರೆಸ್ ಮುಖಂಡರ ಜೊತೆ ಸೇರಿ ಗಿರಿನಗರ ಪೊಲೀಸರು ನೀತಿ ಸಂಹಿತೆಯನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೇರ್ ಮಾಡದ ಗಿರಿನಗರ ಪೊಲೀಸರು ಕಳೆದ ವಿಧಾನಸಭೆ ಚುನಾವಣೆಯ ಬಸವನಗುಡಿ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ಕಾಂಗ್ರೆಸ್‌ ಮುಖಂಡ ಬೋರೇಗೌಡ ಅವರೊಂದಿಗೆ ಸೇರಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿಸಿದ್ದಾರೆ.

ಪೊಲೀಸ್ ಠಾಣೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಮಕ್ಕಳು ಆಡೋದಕ್ಕೆ ಇರುವ ಜಾಗದಲ್ಲಿ ಸ್ಟೇಷನ್ ನಿರ್ಮಿಸಬಾರದು ಎಂದು ಪೊಲೀಸ್ ಠಾಣೆ ನಿರ್ಮಾಣದ ಬಗ್ಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಪೊಲೀಸ್ ಠಾಣೆ ನಿರ್ಮಾಣಕ್ಕೆ ಬೇರೆ ಜಾಗ ನೀಡುವುದಾಗಿ ಶಾಸಕರು ಭರವಸೆ ನೀಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಸ್ಥಳೀಯ ಶಾಸಕ ರವಿಸುಬ್ರಮಣ್ಯ, ಕಾರ್ಪೋರೇಟರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೂ ತರದೆ ಗುದ್ದಲಿ ಪೂಜೆ ನಡೆಸಿದ್ದಾರೆ ಎನ್ನಲಾಗಿದೆ.

For All Latest Updates

TAGGED:

ABOUT THE AUTHOR

...view details