ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆಯಲು ಬಂದಿದ್ದೆ. ಏ.12 ರಂದು ಮಂಡ್ಯದಲ್ಲಿ ತಮ್ಮ ಪರ ಚುನಾವಣಾ ಪ್ರಚಾರಕ್ಕೆ ಬರಲು ಅವರು ಒಪ್ಪಿದ್ದಾರೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಏ.12ರಿಂದ ಸಿದ್ದರಾಮಯ್ಯ ಪ್ರಚಾರ: ನಿಖಿಲ್ ಕುಮಾರಸ್ವಾಮಿ - ನಿಖಿಲ್ ಕುಮಾರಸ್ವಾಮಿ
ಸಿದ್ದರಾಮಯ್ಯ ಅವರನ್ನ ಮಂಡ್ಯ ಪ್ರಚಾರಕ್ಕೆ ಆಹ್ವಾನಿಸಿದ ನಿಖಿಲ್ ಕುಮಾರಸ್ವಾಮಿ. ಏ.12 ರಿಂದ ಸಕ್ಕರೆ ಜಿಲ್ಲೆಯಲ್ಲಿ ಮಾಜಿ ಸಿಎಂ ಪ್ರಚಾರ. ಮತ್ತಷ್ಟು ಕಾವೇರಲಿದೆ ಮಂಡ್ಯ ಚುನಾವಣೆ.
ಶುಕ್ರವಾರ ರಾತ್ರಿ ನಿಖಿಲ್ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿ ಅವರ ಜೊತೆ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್, ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಎಲ್ಲರನ್ನೂ ಭೇಟಿಯಾಗಲು ಸಾಧ್ಯವಾಗಲಿಲ್ಲ. ಹಾಗಾಗಿ, ಇಂದು ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಅವರು ಏ.12 ರಂದು ಚುನಾವಣಾ ಪ್ರಚಾರಕ್ಕೆ ಬರುತ್ತಾರೆ ಎಂದರು.
ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂಬುದು ಸುಳ್ಳು. ನಾನು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಪ್ರಚಾರದಿಂದಾಗಿ ಮುಖಂಡರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಎಲ್ಲರನ್ನೂ ಭೇಟಿಯಾಗಿ ಅವರ ಆಶೀರ್ವಾದ ಪಡೆದುಕೊಳ್ಳುತ್ತೇನೆ. ಮೈತ್ರಿ ಪಕ್ಷದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರುವುದು ನಿಜ ಎಂದರು.