ಐಎಂಎ ದೋಖಾ... ಕ್ಯಾಮೆರಾ ಕಣ್ಗಾವಲಲ್ಲಿ ಮನ್ಸೂರ್ ಆಸ್ತಿ ಜಪ್ತಿ ಮಾಡಲು ಕೋರ್ಟ್ಗೆ ಮನವಿ - undefined
ಮನ್ಸೂರ್ ಗೆ ಸೇರಿದ ಎಲ್ಲ ಚರ ಮತ್ತು ಸ್ಥಿರಾಸ್ತಿಗಳನ್ನು ಕ್ಯಾಮೆರಾ ಕಣ್ಗಾವಲಿನಲ್ಲಿ ಸರ್ಕಾರ ಮುಟ್ಟುಗೋಲು ಹಾಕಬೇಕೆಂದು ವಕೀಲ ಮೊಹಮ್ಮದ್ ತಾಹೀರ್ ಹೈಕೋರ್ಟ್ಗೆ ರಿಟ್ ಸಲ್ಲಿಸಿದ್ದಾರೆ.
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮನ್ಸೂರ್ ಗೆ ಸೇರಿದ ಎಲ್ಲ ಚರ ಮತ್ತು ಸ್ಥಿರಾಸ್ತಿಗಳನ್ನು ಕ್ಯಾಮೆರಾ ಕಣ್ಗಾವಲಿನಲ್ಲಿ ಸರ್ಕಾರ ಮುಟ್ಟುಗೋಲು ಹಾಕಬೇಕೆಂದು ವಕೀಲ ಮೊಹಮ್ಮದ್ ತಾಹೀರ್ ಹೈಕೋರ್ಟ್ಗೆ ರಿಟ್ ಸಲ್ಲಿಸಿದ್ದಾರೆ.
ಮನ್ಸೂರ್ ಗೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನುಸರ್ಕಾರ ಜಪ್ತಿ ಮಾಡುತ್ತಿದೆ. ಮನ್ಸೂರ್ ಸಾಕಷ್ಟು ಚಿನ್ನಾಭರಣ ಮತ್ತು ವಜ್ರದ ಆಭರಣಗಳನ್ನ ಹೊಂದಿದ್ದು ಕೆಲ ಸ್ವಾರ್ಥಿಗಳು ಜಪ್ತಿ ವೇಳೆ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೇ ಜಪ್ತಿ ಮಾಡಿದ ವಸ್ತುಗಳನ್ನು ಸಾಗಿಸುವ ಮಾರ್ಗದಲ್ಲಿ ಕಳೆದು ಹೋಗುವ ಸಾಧ್ಯತೆಯಿದೆ. ಹಾಗಾಗಿ ಎಲ್ಲಾ ವಸ್ತುಗಳನ್ನು ಕ್ಯಾಮೆರಾ ಕಣ್ಗಾವಲಿನಲ್ಲಿ ಜಪ್ತಿ ಮಾಡಬೇಕೆಂದು ಅರ್ಜಿಯಲ್ಲಿ ಮೊಹಮ್ಮದ್ ತಾಹೀರ್ ಮನವಿ ಮಾಡಿದ್ದಾರೆ.
ಈ ಅರ್ಜಿಯಲ್ಲಿ ಸರ್ಕಾರ ಹಾಗೂ ಉತ್ತರ ವಿಭಾಗ ಎಸಿ ಅವರನ್ನು ಪ್ರತಿವಾದಿಯನ್ನಾಗಿ ಮಾಡಿ ಸೀಜ್ ಮಾಡುವ ಪ್ರತಿಯೊಂದು ವಸ್ತುವಿನ ಬಗ್ಗೆ ವಿವರ ದಾಖಲಿಸಬೇಕು. ಪಿಐಡಿಎಫ್ಇ 2004 ರಂತೆ ಸೀಜ್ ವಸ್ತುಗಳ ವಿವರವನ್ನ ದಾಖಲಿಸುವಂತೆ ಉತ್ತರ ವಿಭಾಗದ ಎಸಿ ಹಾಗೂ ಸರ್ಕಾರಕ್ಕೆ ನಿರ್ದೆಶಿಸುವಂತೆ ಮನವಿ ಮಾಡಿದ್ದಾರೆ. ಇಂದು ಅರ್ಜಿ ಸಲ್ಲಿಕೆ ಮಾಡಿದ್ದು ಇನ್ನೇನು ಈ ಅರ್ಜಿ ವಿಚಾರಣೆಗೆ ಬರಬೇಕಿದೆ.