ಕರ್ನಾಟಕ

karnataka

ETV Bharat / state

ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಗಾರ್ತಿ ಮಾತೆ ಮಹಾದೇವಿ ಇನ್ನಿಲ್ಲ

ಮಾರ್ಚ್ 9 ರಂದು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾತೆ ಮಹಾದೇವಿಯವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಉಳಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗಿತ್ತು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಮಾತೆ ಮಹಾದೇವಿ ಇನ್ನಿಲ್ಲ

By

Published : Mar 14, 2019, 5:25 PM IST

ಬೆಂಗಳೂರು: ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ, ಮಾತೆ ಮಹಾದೇವಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಇನ್ನೊಂದು ಗಂಟೆಯಲ್ಲಿ ಆಸ್ಪತ್ರೆಯಿಂದ ಮೃತದೇಹವನ್ನ ರಾಜಾಜಿನಗರದ ಬಸವ ಮಂಟಪಕ್ಕೆ ರವಾನೆ ಮಾಡುವ ಸಾಧ್ಯತೆಗಳಿದ್ದು, ಅರ್ಧ ಗಂಟೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಬಳಿಕ ಕೂಡಲಸಂಗಮಕ್ಕೆ ಅವರ ಪಾರ್ಥಿವ ಶರೀರವನ್ನ ತೆಗೆದುಕೊಂಡು ಹೋಗಲಾಗುವುದು ಎಂದು ಕೂಡಲಸಂಗಮದ ಬಸವ ಧರ್ಮ ಪೀಠದ ಮೂಲಗಳು ಮಾಹಿತಿ ನೀಡಿದ್ದು, ನಾಳೆ ಕೂಡಲಸಂಗಮದಲ್ಲಿ ಲಿಂಗೈಕ್ಯರ ಸಂಸ್ಕಾರ ನಡೆಯಲಿದೆ ಎಂದು ಹೇಳಲಾಗಿದೆ.

Mathemahadevi

ಈ ಮೊದಲು ಅವರ ಆರೋಗ್ಯಸ್ಥಿತಿ ತೀರಾ ಗಂಭೀರವಾಗಿದೆ ಎಂದು ನಗರದ ಮಣಿಪಾಲ್ ಆಸ್ಪತ್ರೆಯ ವೈದ್ಯರಾದ ಸುದರ್ಶನ ಬಲ್ಲಾಳ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು.

ಮಾರ್ಚ್ 9 ರಂದು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾತೆ ಮಹಾದೇವಿಯವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನು ಉಳಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗಿತ್ತು ಎಂದು ವೈದ್ಯರು ತಿಳಿಸಿದ್ದರು ಕೂಡಾಮಾತೆ ಮಹಾದೇವಿಯವರಿಗೆ ಕಿಡ್ನಿ ಹಾಗೂ ಶ್ವಾಸಕೋಶ ತೊಂದರೆ ಇತ್ತು ಎಂದು ಅನಾರೋಗ್ಯದ ಬಗ್ಗೆ ಈ ಮೊದಲು ಮಾತನಾಡಿದ್ದ ಚನ್ನಬಸವಾನಂದ ಸ್ವಾಮೀಜಿ ತಿಳಿಸಿದ್ದರು. ಮಾ.9 ರಂದು ಮಾತೆ ಮಹಾದೇವಿಯವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲಿಂಗಾಯತ ಪ್ರತ್ಯೇಕ ಧರ್ಮದ ಮುನ್ನೆಲೆ ಹೋರಾಟಗಾರ್ತಿಯ ಜೀವನ ಹೀಗಿತ್ತು

ಉತ್ತಮ ವಾಗ್ಮಿ, ಸಾಹಿತಿಯಾಗಿ ಪ್ರಸಿದ್ಧರಾಗಿದ್ದ ಅವರು, ಪ್ರತಿ ವರ್ಷ ಶರಣ ಸಮ್ಮೇಳನ ಆಯೋಜನೆ ಮಾಡುತ್ತಿದ್ದರು. ಕೂಡಲಸಂಗಮ, ಬಸವಕಲ್ಯಾಣದಲ್ಲಿ ಕಾರ್ಯಕ್ರಮ ಆಯೋಜಿಸಿ, ಶರಣ ಧರ್ಮ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಲಿಂಗಾನಂದ ಮಹಾಸ್ವಾಮಿಗಳಿಂದ ಇಷ್ಟಲಿಂಗ ಧೀಕ್ಷೆ ಪಡೆದಿದ್ದ ಅವರು ಜನಿಸಿದ್ದು 1946ರ ಮಾರ್ಚ್ 13ರಂದು. ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಅವರು ಜನಿಸಿದ್ದರು. ಬಿಎಸ್​​​ಸಿ, ಎಂಎ ವ್ಯಾಸಂಗ ಮಾಡಿದ್ದರು.




ಬಸವ ತತ್ವ ದರ್ಶನ ಬೃಹತ್ ಕೃತಿ ರಚಿಸಿದ ಖ್ಯಾತಿ ಮಾತೆ ಮಹಾದೇವಿ ಅವರಿಗೆ ಸೇರುತ್ತದೆ. ಧಾರವಾಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪನೆ, ಮೊದಲ ಮಹಿಳಾ ಜಗದ್ಗುರು ಪೀಠ ಸ್ಥಾಪನೆ, ಕುಂಬಳಗೋಡಿನಲ್ಲಿ ಬಸವ ಗಂಗೋತ್ರಿ ಆಶ್ರಮ, ರಾಜಾಜಿನಗರದಲ್ಲಿ ಬಸವ ಮಂಟಪ ಸ್ಥಾಪನೆ ಅವರ ಸಾಧನೆಗಳಲ್ಲೊಂದು.

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಮುನ್ನಲೆಗೆ ಬಂದಾಗ ಹೋರಾಟದ ನೇತೃತ್ವ ವಹಿಸಿದ್ದು ಮಾತೆ ಮಹಾದೇವಿಯವರು. ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ಪಡೆಯುವವರೆಗೂ ಹೋರಾಟ ನಡೆಸುವುದಾಗಿ ಮಹಾದೇವಿ ಹೇಳಿದ್ದರು. ಜತೆಗೆ ದೆಹಲಿಯಲ್ಲೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದರು.

ABOUT THE AUTHOR

...view details