ಬೆಂಗಳೂರು: ನಯನ ಸಭಾಂಗಣದಲ್ಲಿ ಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿಯನ್ನು ಆಯೋಜಿಸಲಾಗಿತ್ತು. ಆದರೆ, ಯಾವುದೇ ರಾಜಕಾರಣಿಗಳು ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.
ನಾಡು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್.. ಜಯಂತಿ ಕಾರ್ಯಕ್ರಮಕ್ಕೆ ರಾಜಕಾರಣಿಗಳ ನಿರಾಸಕ್ತಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿಯನ್ನು ಆಯೋಜಿಸಲಾಗಿತ್ತು. ಆದರೆ, ಯಾವುದೇ ರಾಜಕಾರಣಿ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.
ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಬರಬೇಕಿತ್ತು. ಆದರೆ, ಅವರು ಗೈರಾಗಿದ್ದರು. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಸಚಿವ ಡಿ ಕೆ ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಡಿ ವಿ ಸದಾನಂದಗೌಡರ ಹೆಸರಿತ್ತು. ಆದರೆ, ಯಾರೊಬ್ಬರೂ ಸಹ ಕಾರ್ಯಕ್ರಮಕ್ಕೆ ಬಂದಿರಲಿಲ್ಲ.
ಗಣ್ಯ ರಾಜಕಾರಣಿಗಳು ಹಾಜರಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ, ಒಡೆಯರ್ ಮೇಲೆ ರಚಿಸಿರುವ ಗೀತೆಗಳು ಹಾಗೂ ರಂಗ ಗೀತೆಗಳನ್ನು ಹಿರಿಯ ರಂಗಭೂಮಿ ಗಾಯಕರಾದ ಪುಟ್ಟಣಯ್ಯ ತಂಡ ನೆರೆದಿದ್ದ ಜನರನ್ನು ಮನರಂಜಿಸಿದರು.