ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಯಿತು.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ರಾಗಾ ಹುಟ್ಟುಹಬ್ಬ ಆಚರಣೆ - undefined
ನಗರದ ಕಬ್ಬನ್ ಪಾರ್ಕ್ನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಸೇರಿ ವಿವಿಧ ಬಗೆಯ ಮರಗಳ ಬೀಜಗಳನ್ನು ಬಳಸಿ 1,00,000 ಸೀಡ್ ಬಾಲ್ಸ್ ತಯಾರು ಮಾಡುವ ಮೂಲಕ ರಾಹುಲ್ ಗಾಂಧಿಯ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿದರು.
ನಗರದ ಕಬ್ಬನ್ ಪಾರ್ಕ್ನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಸೇರಿ ವಿವಿಧ ಬಗೆಯ ಮರಗಳ ಬೀಜಗಳನ್ನು ಬಳಸಿ 1,00,000 ಸೀಡ್ ಬಾಲ್ಸ್ ತಯಾರು ಮಾಡಿದರು. ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಹೆಸರಿನಲ್ಲಿ ಬೆಂಗಳೂರಿನ ಸುತ್ತಮುತ್ತ ಇರುವಂತಹ ಕಾಡಿನ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿ ತಯಾರು ಮಾಡುವಂತಹ ಬೀಜಗಳ ಬಿತ್ತನೆ ಮಾಡಲಾಗುವುದು ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು.
ಈ ಮೂಲಕ ಪ್ರತಿಯೊಬ್ಬರಲ್ಲೂ ಅರಣ್ಯ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ನಮ್ಮ ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ನೀಡಬೇಕೆಂದರೆ ನಾವು ಈ ರೀತಿಯ ಕಾರ್ಯಕ್ರಮ ಮಾಡಬೇಕು. ಕಾಡು ಬೆಳೆಸಿ ನಾಡು ಉಳಿಸಿ ಎಂಬ ಘೋಷ ವಾಕ್ಯದಲ್ಲಿ ಕೆಲಸ ಮಾಡಬೇಕು ಎಂದರು.