ಬೆಂಗಳೂರು: ಟಿಕೆಟ್ ಘೋಷಣೆಯ ವಿಳಂಬದಿಂದ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.
ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ರವಿ ಸುಬ್ರಮಣ್ಯ ಕಣಕ್ಕಿಳಿಯುವ ಸಾಧ್ಯತೆ
ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರವಿ ಸುಬ್ರಮಣ್ಯ
ಪ್ರಧಾನಿ ನರೇಂದ್ರ ಮೋದಿ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆನ್ನುವ ಸುದ್ದಿ ಹಬ್ಬಿತ್ತು. ಆದರೆ ಅಂತಿಮವಾಗಿ ಶಾಸಕ ರವಿಸುಬ್ರಮಣ್ಯಗೆ ಟಿಕೆಟ್ ಸಿಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ದಕ್ಷಿಣಕ್ಕೆ ಯಾರು? ಎನ್ನುವ ಬಗ್ಗೆ ಬಿಜೆಪಿ ಅಧಿಕೃತವಾಗಿ ಘೋಷಿಸಲಿದೆ. ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಸಂಬಂಧ ನಡೆಯುತ್ತಿರುವ ಚರ್ಚೆಯನ್ನ ಗಮನಿಸಿದರೆ ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ಸಿಗುವುದು ಅನುಮಾನವಾಗಿದೆ.