ಕರ್ನಾಟಕ

karnataka

ETV Bharat / state

ಭೀಕರ ರಸ್ತೆ ಅಪಘಾತ: ಸಿಸಿಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ! - undefined

ರಾಯನ್ ಇಂಟರ್ ನ್ಯಾಷನಲ್ ಶಾಲೆಯ ಬಸ್ ಚಾಲಕ ಮಕ್ಕಳನ್ನು ಪಿಕಪ್ ಮಾಡಲು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೆಂಪೋ ಟ್ರಾವೆಲರ್ (ಟಿಟಿ) ರಭಸವಾಗಿ ಬಸ್​ಗೆ ಗುದ್ದಿದ್ದು, ಈ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

By

Published : Jul 13, 2019, 1:49 PM IST

ಬೆಂಗಳೂರು: ಶಾಲಾ ಬಸ್ ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಬನ್ನೇರುಘಟ್ಟ ರಸ್ತೆಯ ರಾಗಿಹಳ್ಳಿ ಬಳಿಯ ಮುಖ್ಯ ರಸ್ತೆ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಳೆದ ಜು. 9 ರಂದು ಈ ಘಟನೆ ಸಂಭವಿಸಿದ್ದು, ಅದೃಷ್ಣವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ರಾಯನ್ ಇಂಟರ್ ನ್ಯಾಷನಲ್ ಶಾಲೆಯ ಬಸ್ ಚಾಲಕ ಮಕ್ಕಳನ್ನು ಪಿಕಪ್ ಮಾಡಲು ಹೋಗುತ್ತಿದ್ದ. ಈ ವೇಳೆ ಬಸ್​ನಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಮಹಿಳೆಯೊಬ್ಬರು ಇದ್ದರು. ರಾಗಿಹಳ್ಳಿ ಬಳಿ ಬಸ್ ಚಲಾಯಿಸುವಾಗ ಜಂಕ್ಷನ್ ಬಳಿ ಬರುತ್ತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ವೇಗವಾಗಿ ಬಂದು ನೇರವಾಗಿ ಬಸ್ ಹಿಂಬದಿಗೆ ಗುದ್ದಿದೆ. ಟಿಟಿ ಗುದ್ದಿದ ರಭಸಕ್ಕೆ ಬಸ್ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಚಾಲಕ ಸೇರಿದಂತೆ ಬಸ್​ನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಈ ಘಟನೆಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

For All Latest Updates

TAGGED:

ABOUT THE AUTHOR

...view details