ಕರ್ನಾಟಕ

karnataka

ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನ ಪ್ರಕರಣ: ಆಸ್ಪತ್ರೆಗೆ ಪೊಲೀಸ್ ಆಯುಕ್ತರ ಭೇಟಿ

By

Published : Jun 24, 2019, 8:33 PM IST

ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಹಂಗಾಮಿ ನೌಕರ ರೇವಣ್ಣ ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ ನೀಡಿದ್ದಾರೆ.

ಬೌರಿಂಗ್​ಗೆ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ

ಬೆಂಗಳೂರು: ವಿಧಾನಸೌಧದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೇವಣ್ಣ ಕುಮಾರ್​ ಚಿಕಿತ್ಸೆ ಪಡೆಯುತ್ತಿರುವ ಬೌರಿಂಗ್ ಆಸ್ಪತ್ರೆಗೆ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ ನೀಡಿದ್ದಾರೆ.

ಭೇಟಿ‌ ನೀಡಿದ ಬಳಿಕ ಮಾತನಾಡಿದ ಅವರು, ಆತ್ಮಹತ್ಯೆಗೆ ರೇವಣ್ಣ ಯಾವ ಆಯುಧ ಬಳಸಿದ್ದಾರೆಂದು ಪತ್ತೆಯಾಗಿಲ್ಲ,‌ ಸ್ಥಳದಲ್ಲಿ ಯಾವುದೇ ಹರಿತವಾದ ವಸ್ತು ಪತ್ತೆಯಾಗಿಲ್ಲ. ಸದ್ಯ ರೇವಣ್ಣ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ. ಆತ ಚೇತರಿಸಿಕೊಂಡ ಬಳಿಕ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದರು.

ಬೌರಿಂಗ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಭೇಟಿ

ರೇವಣ್ಣ, ಹಂಗಾಮಿ ನೌಕರನನ್ನು ಖಾತ್ರಿ ಪಡಿಸಿಕೊಳ್ಳುವುದಕ್ಕಾಗಿ ಹಲವು ದಿನಗಳಿಂದ ವಿಧಾನಸೌಧಕ್ಕೆ ಬಂದಿದ್ದ. ಸರ್ಕಾರದ ಗಮನ ಸೆಳೆಯಲು ಈ ಆತ್ಮಹತ್ಯೆ ಯತ್ನ ನಡೆಸಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಉಮೇಶ್ ಕುಮಾರ್ ಹೇಳಿದರು.

TAGGED:

ABOUT THE AUTHOR

...view details