ಚಾಮರಾಜನಗರ: ಜಿಲ್ಲೆಯಲ್ಲಿಂದು 57 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,787ಕ್ಕೆ ಏರಿಕೆಯಾಗಿದೆ.
ಇಂದು ಬರೋಬ್ಬರಿ 105 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 702 ಸಕ್ರಿಯ ಪ್ರಕರಣಗಳಿವೆ.

ಇದರಲ್ಲಿ 44 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 22 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 912 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಇನ್ನು, ಇಂದು ಫೇಸ್ಬುಕ್ ಲೈವ್ ನಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡಿ, ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, 40-60 ವಯಸ್ಸಿನ ವ್ಯಕ್ತಿಗಳು ಹೆಚ್ಚು ಮೃತರಾಗಿದ್ದಾರೆ. ಕೊರೊನಾ ಬಗ್ಗೆ ನಿರ್ಲಕ್ಷ್ಯ ತಾಳದೇ ಮುಂಜಾಗ್ರತೆ ವಹಿಸಬೇಕು. ರೋಗ ಲಕ್ಷಣ ಕಂಡು ಬಂದರೆ ಉಪೇಕ್ಷೆ ಬೇಡ ಎಂದು ಮನವಿ ಮಾಡಿದ್ದಾರೆ.