ಚಾಮರಾಜನಗರ: ಜಿಲ್ಲೆಯಲ್ಲಿಂದು 113 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,098ಕ್ಕೆ ಏರಿಕೆಯಾಗಿದೆ. ಓರ್ವ ಮಹಿಳೆ ಮೃತಪಟ್ಟಿದ್ದಾರೆ.
ಇಂದು 67 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 7,32 ಸಕ್ರಿಯ ಪ್ರಕರಣಗಳಿವೆ.
ಇದರಲ್ಲಿ 39 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 310 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 1482 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.