ಚಾಮರಾಜನಗರ/ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿಂದು 114 ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಡಪಟ್ಟರೆ, ಚಾಮರಾಜನಗರದಲ್ಲಿ 28 ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,753ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿಂದು 114 ಪ್ರಕರಣ ಪತ್ತೆ: ಚಾಮರಾಜನಗರ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ - ಚಾಮರಾಜನಗರ ಕೊರೊನಾ ಪ್ರಕರಣಗಳು
ಚಿಕ್ಕಬಳ್ಳಾಪುರದಲ್ಲಿಂದು 114 ಪಾಸಿಟಿವ್ ಪ್ರಕರಣಗಳು ದೃಢಪಟ್ಟರೆ, ಚಾಮರಾಜನಗರದಲ್ಲಿ 28 ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,753ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರ 34, ಬಾಗೇಪಲ್ಲಿ 18, ಚಿಂತಾಮಣಿ 15, ಗೌರಿಬಿದನೂರು 16, ಗುಡಿಬಂಡೆ 13, ಶಿಡ್ಲಘಟ್ಟ 18 ಜನರಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 10,862ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 9,722ಕ್ಕೆ ಏರಿಕೆಯಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲಿಂದು 85 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 321ಕ್ಕೆ ಇಳಿದಿದೆ. 41 ಮಂದಿ ಸೋಂಕಿತರು ಐಸಿಯುನಲ್ಲಿದ್ದು 153 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 323 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಇಂದು ಒಂದೇ ದಿನ 1,072 ಪರೀಕ್ಷೆಗಳನ್ನು ನಡೆಸಲಾಗಿದೆ.