ಚಾಮರಾಜನಗರ: ಅಕ್ರಮವಾಗಿ ಸಾಗಿಸುತ್ತಿದ್ದ 12 ಟನ್ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬಳೆಪೇಟೆಯಲ್ಲಿ ಅಕ್ಕಿ ಸಾಗಣೆಯ ಖಚಿತ ಮಾಹಿತಿ ಮೇರೆಗೆ ಯಳಂದೂರು ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ ವೇಳೆ ಕಾರು ಹಾಗೂ ಪಿಕ್ ಅಪ್ ವಾಹನಗಳಲ್ಲಿ ತುಂಬಿದ್ದ ನೂರಾರು ಚೀಲ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಇನ್ನು, ಈ ದಾಳಿಯಲ್ಲಿ 12 ಟನ್ ಅಕ್ಕಿ ವಶಪಡಿಸಿಕೊಂಡಿದ್ದು, ಒಂದು ಕಾರು ಹಾಗೂ ಎರಡು ಪಿಕ್ ಅಪ್ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಯಳಂದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಗೃಹಿಣಿ ಶವ ಪತ್ತೆ :ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ. ಮೂಡ್ನಾಕೂಡು ಗ್ರಾಮದ ಮಹೇಶ್ ಎಂಬುವರ ಪತ್ನಿ ಶಾಲಿನಿ (22) ಮೃತರು. ಶಾಲಿನಿ ಅವರ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.
ಕೆಲವೇ ವರ್ಷದ ಹಿಂದೆ ಮದುವೆಯಾಗಿರುವ ಶಾಲಿನಿಯನ್ನು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿ ಬಾವಿಗೆ ಎಸೆದಿದ್ದಾರೆ ಎಂದು ಮೃತ ಶಾಲಿನಿ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ತಪ್ಪಿತಸ್ಥರ ಬಂಧನ ಆಗುವವರೆಗೆ ಮೃತದೇಹ ತೆಗೆಯಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. ಸ್ಥಳಕ್ಕೆ ಚಾಮರಾಜನಗರ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಭೇಟಿ ನೀಡಿದ್ದಾರೆ. ಅವರು ಕುಟುಂಬದವರ ಮನವೊಲಿಸಿದರೂ ಒಪ್ಪುತ್ತಿಲ್ಲ. ಶಾಲಿನಿ ತಂದೆ ಶಾಂತಪ್ಪ ಮತ್ತು ಚಿಕ್ಕಮ್ಮ ಚಿನ್ನಮ್ಮ ಅವರು ಮೊದಲು ತಪ್ಪಿತಸ್ಥರನ್ನು ಬಂಧಿಸಿ ಎಂದು ಮನವಿ ಮಾಡಿದ್ದಾರೆ.
ಶಾಲಾ ಮಕ್ಕಳ ಮೇಲೆ ಜೇನು ದಾಳಿ :ಗುಂಡ್ಲುಪೇಟೆ ಪಟ್ಟಣದ ಮಡಹಳ್ಳಿ ರಸ್ತೆಯಲ್ಲಿರುವ ಮಾನಸ ವಿದ್ಯಾಸಂಸ್ಥೆಯಲ್ಲಿ ಐವರು ವಿದ್ಯಾರ್ಥಿನಿಯರಿಗೆ ಹೆಜ್ಜೇನು ಕಚ್ಚಿರುವ ಘಟನೆ ನಡೆದಿದೆ.