ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ 2.33 ಕೋಟಿ ರೂ. ಸಂಗ್ರಹವಾಗಿದೆ.
ಕೇವಲ 47 ದಿನಗಳಲ್ಲಿ 2,33,57,28 ಕೋಟಿ ರೂ. ಸಂಗ್ರಹವಾಗಿದೆ ಎಂದು ಹೇಳಬಹುದು. ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದು, ಹುಂಡಿಯಲ್ಲಿ 155 ಗ್ರಾಂ ಚಿನ್ನ, 2.2 ಕೆಜಿ ಬೆಳ್ಳಿಯನ್ನು ದೇವರಿಗೆ ಅರ್ಪಿಸಿದ್ದಾರೆ. 122 ದಿನಗಳ ಬಳಿಕ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. ಇದರಲ್ಲಿ ಕೊರೊನಾ ಲಾಕ್ಡೌನ್ ಪರಿಣಾಮ 75 ದಿನಗಳ ಕಾಲ ದೇವಾಲಯ ಬಂದ್ ಮಾಡಲಾಗಿತ್ತು ಎಂಬುದು ವಿಶೇಷ.