ಚಾಮರಾಜನಗರ: ಕೊರೊನಾ ಎರಡನೇ ಅಲೆಯ ಅಬ್ಬರದಲ್ಲಿ ಸಿಲುಕಿರುವ ಜಿಲ್ಲೆಯಲ್ಲಿ ನಿನ್ನೆ 275 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ.
ನಿನ್ನೆ 109 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 1,294 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 58 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 909 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಇನ್ನೂ 3,575 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.