ಚಾಮರಾಜನಗರ: ಅನ್ಲಾಕ್ ಆದರೂ ಮಧ್ಯಾಹ್ನದ ಬಳಿಕ ಪ್ರಯಾಣಿಕರು ಬರಲು ಹಿಂದೇಟು ಹಾಕುತ್ತಿದ್ದು ಮಂಗಳವಾರ ಕೆಎಸ್ಆರ್ಟಿಸಿ ಚಾಮರಾಜನಗರ ವಿಭಾಗಕ್ಕೆ 1 ಲಕ್ಷ 20 ಸಾವಿರ ರೂ.ಸಂಗ್ರಹವಾಗಿದೆ.
ಕೆಎಸ್ಆರ್ಟಿಸಿ ಚಾಮರಾಜನಗರ ವಿಭಾಗಕ್ಕೆ 30 ಕೋಟಿ ರೂ.ನಷ್ಟ - ಕೆಎಸ್ಆರ್ಟಿಸಿ ಚಾಮರಾಜನಗರ ವಿಭಾಗ
ಲಾಕ್ಡೌನ್ ವೇಳೆ ಕೆಎಸ್ಆರ್ಟಿಸಿ ಚಾಮರಾಜನಗರ ವಿಭಾಗಕ್ಕೆ 30 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಅನ್ಲಾಕ್ನಲ್ಲಿ ಬಸ್ ಸಂಚಾರದ ಕುರಿತು ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ಈಟಿವಿ ಭಾರತದೊಂದಿಗೆ ಮಾತನಾಡಿ, ಲಾಕ್ಡೌನ್ ಅವಧಿಯಲ್ಲಿ ನಮ್ಮ ವಿಭಾಗಕ್ಕೆ 30 ಕೋಟಿ ರೂ. ನಷ್ಟ ಉಂಟಾಗಿದೆ. ಮೈಸೂರಿಗೆ ಇನ್ನೂ ಕಾರ್ಯಾಚರಣೆ ಆರಂಭವಾಗಿಲ್ಲ. ಬೆಂಗಳೂರಿಗೆ ಬೇಡಿಕೆಗೆ ತಕ್ಕಂತೆ 30 ಬಸ್, ತಿರುಪತಿಗೆ 3 ಹಾಗೂ ಜಿಲ್ಲೆಯ ಪಟ್ಟಣ ಮತ್ತು ಹೋಬಳಿ ಕೇಂದ್ರಗಳಿಗೆ 10 ಬಸ್ಗಳು ಕಾರ್ಯಾಚರಣೆ ನಡೆಸಿವೆ ಎಂದು ತಿಳಿಸಿದ್ದಾರೆ.
120 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರತಿ ಟ್ರಿಪ್ ನಂತರ ಬಸ್‌ಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಮೈಸೂರಿಗೆ ಮತ್ತು ಗ್ರಾಮಾಂತರ ಭಾಗಕ್ಕೆ ಬಸ್ ಸಂಚಾರ ಆರಂಭಗೊಂಡಾಗ ಆದಾಯ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಅವರು ಮಾಹಿತಿ ನೀಡಿದರು.