ಚಾಮರಾಜನಗರ: ಇಂದು ಜಿಲ್ಲೆಯಲ್ಲಿ ಹೊಸದಾಗಿ 35 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2,406 ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಇಂದು 24 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 505 ರಷ್ಟಾಗಿದ್ದು, 186 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 18 ಮಂದಿ ಐಸಿಯುನಲ್ಲಿದ್ದು, 391 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಚಾಮರಾಜನಗರದ ಕುದೇರಿನ 30 ವರ್ಷದ ವ್ಯಕ್ತಿಯೋರ್ವ ಸೋಂಕಿತರಾಗಿ ಕಳೆದ ತಿಂಗಳು 28 ರಂದು ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಮತ್ತೊಬ್ಬರು 85 ವರ್ಷದ ಚಾಮರಾಜನಗರ ಗಾಳಿಪುರ ನಿವಾಸಿಯಾಗಿದ್ದು ಹೃದಯ, ಕಿಡ್ನಿ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲಿ ಸೋಮವಾರ ಮೃತಪಟ್ಟಿದ್ದಾರೆ. ಮೃತಪಟ್ಟ ಬಳಿಕ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ 49 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಂತಾಗಿದೆ.
ಇಂದು ಗುಣಮುಖರಾಗಿ ಬಿಡುಗಡೆಯಾದವರಲ್ಲಿ 60 ವರ್ಷ ಮೇಲ್ಪಟ್ಟ 5 ಮಂದಿಯ ಜೊತೆಗೆ ಐವರು ಚಿಣ್ಣರು ಸೋಂಕಿನಿಂದ ಗುಣಮುಖರಾಗಿದ್ದಾರೆ.