ಚಾಮರಾಜನಗರ: ಜಿಲ್ಲಾ ದಸರಾ ಆಚರಣೆಗೆ 36 ಲಕ್ಷ ರೂ. ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅನುದಾನ ಬಿಡುಗಡೆಯಾಗದೆ ಸಿದ್ಧತೆಗೆ ತೊಂದರೆಯಾಗಿದೆ. ತಕ್ಷಣವೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸಿಎಂಗೆ ಪತ್ರ ಬರೆದಿದ್ದರು. ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಗೆ ಸಿಎಂ ಆದೇಶಿಸಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನು 17 ರಿಂದ 20ರವರೆಗೆ ಪ್ರತಿದಿನ ಸಂಜೆ 7 ರಿಂದ 8 ರವರೆಗೆ ಚಾಮರಾಜೇಶ್ವರ ದೇವಾಲಯದ ಒಳ ಆವರಣದಲ್ಲಿ ವಿವಿಧ ಗಾಯನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮಗಳ ವಿವರ :