ಚಾಮರಾಜನಗರ: ಜಿಲ್ಲೆಯಲ್ಲಿಂದು 38 ನೂತನ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3781ಕ್ಕೆ ಏರಿಕೆಯಾಗಿದೆ.
ಚಾಮರಾಜನಗರದಲ್ಲಿಂದು 38 ಮಂದಿಗೆ ಕೊರೊನಾ: ಪೊಲೀಸ್ ವರಿಷ್ಠಾಧಿಕಾರಿಗೂ ಸೋಂಕು - ಚಾಮರಾಜನಗರ
ಚಾಮರಾಜನಗರ ಜಿಲ್ಲೆಯಾದ್ಯಂತ ಇಂದು 38 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 58 ಮಂದಿ ಗುಣಮುಖರಾಗಿದ್ದಾರೆ. ಇನ್ನು, ಚಾಮರಾಜನಗರ ಎಸ್ಪಿ ದಿವ್ಯಾ ಸಾರಾ ಥಾಮಸ್ ಅವರಲ್ಲಿಯೂ ಸಹ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಜಿಲ್ಲೆಯಲ್ಲಿಂದು 58 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 634 ಆಗಿದೆ. 45 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 317 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 234 ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೂ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಜಿಲ್ಲಾ ಎಸ್ಪಿಗೂ ಸೋಂಕು: ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರಿಗೂ ಸಹ ಕೊರೊನಾ ಸೋಂಕು ದೃಢವಾಗಿದ್ದು, ಹೋಂ ಐಸೋಲೇಷನ್ ನಲ್ಲಿದ್ದಾರೆ. ಶುಕ್ರವಾರ ಚಾಮರಾಜನಗರ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದ್ದು, ಅಧಿಕಾರಿಯ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಸಿಬ್ಬಂದಿಗೆ ಆತಂಕ ಎದುರಾಗಿದೆ.