ಚಾಮರಾಜನಗರ: ಜಿಲ್ಲೆಯಲ್ಲಿಂದು 37 ಹೊಸ ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2687 ಕ್ಕೆ ಏರಿಕೆಯಾಗಿದೆ.
ಮೃತರಿಷ್ಟು:
ಇಂದು ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಚಾಮರಾಜನಗರದ 49 ವರ್ಷದ ವ್ಯಕ್ತಿಯೊಬ್ಬರು ಸೋಂಕಿತರಾಗಿ ಕಳೆದ 6 ರಂದು ದಾಖಲಾಗಿ ಅಂದೇ ದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಂಜನಗೂಡು ತಾಲೂಕಿನ ಕೊಣನೂರು ಗ್ರಾಮದ ವ್ಯಕ್ತಿ ಕಳೆದ 4 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ 6 ರಂದು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ.
ಗುಣಮುಖ:
ಇಂದು ಸೋಂಕಿನಿಂದ 57 ಮಂದಿ ಸೋಂಕಿನಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 516 ಜನರಲ್ಲಿ ಸಕ್ರಿಯ ಪ್ರಕರಣಗಳಿವೆ.
18 ಮಂದಿ ಐಸಿಯುನಲ್ಲಿ ದಾಖಲಾಗಿದ್ದು, 166 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 354 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.