ಚಾಮರಾಜನಗರ: ಜಿಲ್ಲೆಯಲ್ಲೂ ಕೋವಿಡ್ ಎರಡನೇ ಅಲೆಯ ಅಬ್ಬರ ಜೋರಾಗಿದೆ. ಶುಕ್ರವಾರ ಜಿಲ್ಲೆಯಲ್ಲಿ ಬರೋಬ್ಬರಿ 420 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,312ಕ್ಕೆ ಏರಿಕೆಯಾಗಿದೆ.
238 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 53 ಮಂದಿ ಐಸಿಯುನಲ್ಲಿದ್ದು, 1,643 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 5,040 ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.