ಚಾಮರಾಜನಗರ: ಜಿಲ್ಲೆಯಲ್ಲಿಂದು 44 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,825ಕ್ಕೆ ಏರಿಕೆಯಾಗಿದೆ.
ಚಾಮರಾಜನಗರದಲ್ಲಿಂದು 44 ಮಂದಿಗೆ ಕೊರೊನಾ : 43 ಮಂದಿ ಗುಣಮುಖ - Chamarajanagara corona updates
ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.
Chamarajanagara
ಇಂದು 43 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 633 ಪ್ರಕರಣಗಳಿವೆ. ಇದರಲ್ಲಿ 45 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 313 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 548 ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೂ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಚಾಮರಾಜನಗರ ತಾಲೂಕಿನ ಕಾಡಹಳ್ಳಿ ಗ್ರಾಮದ 41 ವರ್ಷದ ಮಹಿಳೆ ಬಹು ಅಂಗಾಂಗ ವೈಫಲ್ಯದಿಂದ ಕಳೆದ 25 ರಂದು ಮೃತಪಟ್ಟಿದ್ದು, ನಿಧನದ ಬಳಿಕ ಕೊರೊನಾ ಇರುವುದು ದೃಢಪಟ್ಡಿದೆ. ಇದುವರೆಗೆ ಕೊರೊನಾದಿಂದ 60 ಮಂದಿ ಕೋವಿಡೇತರ ಕಾರಣದಿಂದ 27 ಮಂದಿ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ.