ಚಾಮರಾಜನಗರ: ಜಿಲ್ಲೆಯಲ್ಲಿಂದು 45 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2,154ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
32 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 451 ರಷ್ಟಾಗಿದೆ. 199 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 342 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಐಸಿಯುನಲ್ಲಿ 20 ಮಂದಿ ದಾಖಲಾಗಿದ್ದಾರೆ.
ಕೊಳ್ಳೇಗಾಲ ತಾಲೂಕಿನ 71 ವರ್ಷದ ವೃದ್ಧ ಸೋಂಕು ತಗುಲಿಸಿಕೊಂಡು, ಕಳೆದ 24 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮತ್ತೊಬ್ವರು ಚಾಮರಾಜನಗರ ತಾಲೂಕಿನ ಕೆಲ್ಲಂಬಳ್ಳಿ ಗ್ರಾಮದ 60 ವರ್ಷದ ಮಹಿಳೆ ಮೆದುಳಿನ ರಕ್ತಸ್ರಾವದಿಂದ ಬಳಲಿ 24 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಬಳಿಕ, ಇವರ ಗಂಟಲ ದ್ರವ ಪರೀಕ್ಷಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೂ 43 ಮಂದಿ ಸೋಂಕಿತರು ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗಳ ಸಂಖ್ಯೆ 37 ಸಾವಿರ ದಾಟಿದ್ದು, 82 ಮಂದಿ ಹೋಂ ಐಸೋಲೇಷನ್ನಲ್ಲಿದ್ದವರು ಸೇರಿದಂತೆ 1660 ಮಂದಿ ಗುಣಮುಖರಾಗಿದ್ದಾರೆ.