ಚಾಮರಾಜನಗರ: ಜಿಲ್ಲೆಯಲ್ಲಿಂದು 46 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4114ಕ್ಕೆ ಏರಿಕೆಯಾಗಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
ಇಂದು 43 ಮಂದಿ ಕೊರೊನಾದಿಂದ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 734 ಆಗಿದೆ. 39 ಮಂದಿ ಸೋಂಕಿತರು ಐಸಿಯುನಲ್ಲಿದ್ದು, 332 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. 827 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.