ಸಿಕ್ಕಾಲಿ(ತ.ನಾಡು):ಕರ್ನಾಟಕ ಹಾಗೂ ತಮಿಳುನಾಡು ಗಡಿಯಲ್ಲಿರುವ ಇಕ್ಕಲೂರು ದೇಗುಲಕ್ಕೆ ಸಾಗುತ್ತಿದ್ದ ರಾಜ್ಯದ ಯಾತ್ರಿಗಳು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಾಮರಾಜನಗರದ ಗುಂಡ್ಲುಪೇಟೆಯ 10 ನಿವಾಸಿಗಳು ತಮಿಳುನಾಡಿನ ಗಡಿ ಭಾಗದಲ್ಲಿರುವ ಇಕ್ಕಲೂರು ದೇಗುಲಕ್ಕೆ ತೆರಳುತ್ತಿದ್ದ ವೇಳೆ ಸಿಕ್ಕಾಲಿ ಎಂಬಲ್ಲಿ ಅವರು ಸಾಗುತ್ತಿದ್ದ ಆಟೋ ಅಪಘಾತಕ್ಕೀಡಾಗಿದೆ. ಪರಿಣಾಮ ಐವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.