ಚಾಮರಾಜನಗರ:ಜಿಲ್ಲೆಯಲ್ಲಿಂದು 51 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3634ಕ್ಕೆ ಏರಿಕೆಯಾಗಿದ್ದು, ಮೂವರು ಸೋಂಕಿತರು ಇಂದು ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಇಂದು 44 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 600 ಆಗಿದೆ. 24 ಸೋಂಕಿತರು ಐಸಿಯುನಲ್ಲಿದ್ದು, 299 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. ಚಾಮರಾಜನಗರದ 49 ವರ್ಷದ ಮಹಿಳೆಯೊಬ್ಬರು ಕಳೆದ 17 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಚಾಮರಾಜನಗರದ 82 ವರ್ಷದ ವ್ಯಕ್ತಿಯೊಬ್ಬರು ಸೋಂಕಿತರಾಗಿ ಕಳೆದ 21 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಅಸುನೀಗಿದ್ದಾರೆ. ಚಾಮರಾಜನಗರ ತಾಲೂಕಿನ ನಲ್ಲೂರು ಗ್ರಾಮದ 60 ವರ್ಷದ ವ್ಯಕ್ತಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಕಳೆದ 22 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಇಂದು ಅಸುನೀಗಿದ್ದಾರೆ.