ಚಾಮರಾಜನಗರ:ಕೊರೊನಾ ಎರಡನೇ ಅಲೆಯ ಅಬ್ಬರ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ನಿನ್ನೆ ಬರೋಬ್ಬರಿ 553 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,400ಕ್ಕೆ ಏರಿಕೆಯಾಗಿದೆ.
ನಿನ್ನೆ ಕೋವಿಡ್ನಿಂದ 382 ಮಂದಿ ಗುಣಮುಖರಾಗಿದ್ದಾರೆ. 50 ಮಂದಿ ಐಸಿಯುನಲ್ಲಿದ್ದು, 1894 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರಾಗಿರುವ 6,636 ಮಂದಿ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.