ಚಾಮರಾಜನಗರ: ಇಂದು ಜಿಲ್ಲೆಯಲ್ಲಿ ಹೊಸದಾಗಿ 59 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 1964ಕ್ಕೆ ಏರಿಕೆಯಾಗಿದೆ.
ಚಾಮರಾಜನಗರದಲ್ಲಿ ಇಂದು 59 ಸೋಂಕಿತರು ಪತ್ತೆ....25 ಮಂದಿ ಗುಣಮುಖ - New corona cases
ಜಿಲ್ಲೆಯಲ್ಲಿಂದು 59 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಹೋಂ ಐಸೋಲೇಷನ್ ನಲ್ಲಿದ್ದ 25 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
Chamrajnagara corona cases
ಇಂದು ಪತ್ತೆಯಾದ ಸೋಂಕಿತರಲ್ಲಿ 60 ವರ್ಷ ಮೇಲ್ಪಟ್ಟ 10 ಮಂದಿ ಇದ್ದು 14 ವರ್ಷದೊಳಗಿನ ನಾಲ್ವರು ಮಕ್ಕಳಿದ್ದಾರೆ. ಇನ್ನೂ ಆಶಾದಾಯಕ ಬೆಳೆವಣಿಗೆ ಎನ್ನುವಂತೆ ಹೋಂ ಐಸೋಲೇಷನ್ ನಲ್ಲಿದ್ದ 25 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
ಸದ್ಯ 503 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದ್ದು, 36 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 165 ಸೋಂಕಿತರು ಹೋಂ ಐಸೋಲೇಷನ್ ನಲ್ಲಿದ್ದಾರೆ. 354 ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.