ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ 50 ಸಾವಿರ ಕೋವಿಡ್ ಪರೀಕ್ಷೆ: 3 ಸಾವಿರದತ್ತ ಸೋಂಕಿತರು

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Chamarajanagara
Chamarajanagara

By

Published : Sep 12, 2020, 8:02 PM IST

Updated : Sep 12, 2020, 8:21 PM IST

ಚಾಮರಾಜನಗರ:ಜಿಲ್ಲೆಯಲ್ಲಿಂದು 59 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಇಂದಿನ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,938 ಕ್ಕೆ ಏರಿಕೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಸುಮಾರು 50,406 ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಈ ದಿನ ಸೋಂಕಿಗೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ 87 ವರ್ಷದ ವೃದ್ಧೆ ಸೋಂಕಿತರಾಗಿ ಕಳೆದ 5 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ 11 ರಂದು ಮೃತಪಟ್ಟಿದ್ದಾರೆ. ಇನ್ನು, ಚಾಮರಾಜನಗರದ 57 ವರ್ಷದ ಮಹಿಳೆ ಕಳೆದ 8 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.ಈ ಮೂಲಕ ಮೃತರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿನಿಂದ ಸುಮಾರು 58 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 550 ಸಕ್ರಿಯ ಪ್ರಕರಣಗಳಿವೆ.

ಇನ್ನು 160 ಮಂದಿ ಹೋಂ ಐಸೋಲೇಷನ್ ನಲ್ಲಿ, 30 ಮಂದಿ ಐಸೋಲೇಷನ್ ನಲ್ಲಿದ್ದಾರೆ. 601 ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

Last Updated : Sep 12, 2020, 8:21 PM IST

ABOUT THE AUTHOR

...view details