ಚಾಮರಾಜನಗರ: ಜಿಲ್ಲೆಯಲ್ಲಿಂದು 66 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3484ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿತ ಓರ್ವರು ಬಲಿಯಾಗಿದ್ದಾರೆ.
66 ಮಂದಿಗೆ ಸೋಂಕು, 73 ಜನ ಕೊರೊನಾದಿಂದ ಗುಣಮುಖ - ಚಾಮರಾಜನಗರ ಸುದ್ದಿ
ಕೊಳ್ಳೇಗಾಲದ 65 ವರ್ಷದ ವ್ಯಕ್ತಿಯೊಬ್ಬರು ಸೆ. 11ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರದಂದು ಮೃತಪಟ್ಟಿದ್ದಾರೆ..
ಚಾಮರಾಜನಗರ
ಇಂದು 73 ಮಂದಿ ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 619 ಆಗಿದೆ. 34 ಸೋಂಕಿತರು ಐಸಿಯುನಲ್ಲಿದ್ದು 250 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. 1058 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಕೊಳ್ಳೇಗಾಲದ 65 ವರ್ಷದ ವ್ಯಕ್ತಿಯೊಬ್ಬರು ಸೆ. 11ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರದಂದು ಮೃತಪಟ್ಟಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ಕೋವಿಡ್ ನಿಯಮಾನುಸಾರ ಸ್ವಯಂ ಸೇವಕರು ನೆರವೇರಿಸಿದ್ದಾರೆ.