ಚಾಮರಾಜನಗರ:ಜಿಲ್ಲೆಯಲ್ಲಿಂದು ಹೊಸದಾಗಿ 68 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,346ಕ್ಕೆ ಏರಿಕೆಯಾಗಿದೆ.
ಗುಣಮುಖ:
ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 115 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಕ್ರಿಯ ಪ್ರಕರಣಗಳಿಷ್ಟು:
ಇನ್ನು ಜಿಲ್ಲೆಯಲ್ಲಿ 585 ಪ್ರಕರಣಗಳು ಸಕ್ರಿಯವಾಗಿದ್ದು, ಇದರಲ್ಲಿ 25 ಸೋಂಕಿತರು ಐಸಿಯುನಲ್ಲಿದ್ದಾರೆ. 227 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. 764 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಮೃತರ ಮಾಹಿತಿ:
ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ 70 ವರ್ಷದ ವ್ಯಕ್ತಿ ಕಳೆದ 16 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು, ಚಾಮರಾಜನಗರ 73 ವರ್ಷದ ವ್ಯಕ್ತಿ ಹೃದಯ ಸಂಬಂಧಿ ಖಾಯಿಲೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದು ನಿಧನದ ನಂತರ ಕೋವಿಡ್ ಇರುವುದು ದೃಢಪಟ್ಟಿದೆ. ಚಾಮರಾಜನಗರದ 58 ವರ್ಷದ ವ್ಯಕ್ತಿಯೊಬ್ಬರು ಸಕ್ಕರೆ ಕಾಯಿಲೆ ಹಾಗೂ ಉಸಿರಾಟದ ಸಮಸ್ಯೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದಾರೆ. ಇವರಿಗೂ ನಿಧನದ ನಂತರ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 73 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಮೂವರ ಅಂತ್ಯಸಂಸ್ಕಾರವನ್ನು ಕೋವಿಡ್ ನಿಯಮಾನುಸಾರ ಸ್ವಯಂ ಸೇವಕರು ನೆರವೇರಿಸಿದ್ದಾರೆ.