ಚಾಮರಾಜನಗರ :ಮಲೆಮಹದೇಶ್ವರ ವನ್ಯಜೀವಿ ಧಾಮದ ಪಿ ಜಿ ಪಾಳ್ಯ ವಲಯದಲ್ಲಿ ಹುಲಿ ಗಣತಿಗೆ ಹಾಕಲಾಗಿದ್ದ ಕ್ಯಾಮೆರಾದಲ್ಲಿ ಕರಿ ಚಿರತೆಯೊಂದು ಸೆರೆಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಲೆಮಹದೇಶ್ವರ ವನ್ಯಜೀವಿಧಾಮದ ಡಿಎಫ್ಒ ಏಡುಕುಂಡಲು, ಕೆಲವು ತಿಂಗಳುಗಳ ಹಿಂದೆಯಷ್ಟೇ ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕರಿಚಿರತೆ ಸೆರೆಯಾಗಿ, ಅದು ಚಾಮರಾಜನಗರದ ಬಘೀರಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದೇ ಬಘೀರಾನೆ ಸೆರೆಯಾಗಿರುವ ಸಾಧ್ಯತೆ ದಟ್ಟವಾಗಿದೆ.