ಕರ್ನಾಟಕ

karnataka

ETV Bharat / state

ಚಾಮರಾಜನಗರ: ವಧು ಸಿಗಲೆಂದು ಮಲೆ ಮಾದಪ್ಪನ ಬೆಟ್ಟಕ್ಕೆ ಯುವಕರ ಪಾದಯಾತ್ರೆ - etv bharat kannada

ರೈತರ ಮಕ್ಕಳ ಮದುವೆಗೆ ವಧು ಸಿಗಲೆಂದು ಪ್ರಾರ್ಥಿಸಿ ಯುವಕರ ತಂಡ ದೀಪಾವಳಿ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದೆ.

a-group-of-young-man-hikes-to-the-hill-of-male-madappa-to-get-a-bride
ಮಲೆ ಮಾದಪ್ಪನ ಬೆಟ್ಟಕ್ಕೆ ಯುವಕರ ಪಾದಯಾತ್ರೆ

By ETV Bharat Karnataka Team

Published : Nov 4, 2023, 8:40 PM IST

Updated : Nov 14, 2023, 10:26 AM IST

ಮಲೆ ಮಾದಪ್ಪನ ಬೆಟ್ಟಕ್ಕೆ ಯುವಕರ ಪಾದಯಾತ್ರೆ

ಚಾಮರಾಜನಗರ: ದೀಪಾವಳಿ ಹಾಗೂ ಕಾರ್ತಿಕ ಮಾಸದ ಪ್ರಯುಕ್ತ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದ ಸುಮಾರು 100ಕ್ಕೂ ಅಧಿಕ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 160 ಕಿ.ಮೀ ಪಾದಯಾತ್ರೆ ಆರಂಭಿಸಿರುವ ಯುವಕರ ತಂಡ ಹಿಂದಿನಿಂದ ಬೆಳೆದು ಬಂದ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಹೆಣ್ಣು ಸಿಗದೇ ಮದುವೆ ಆಗದ ಕಾರಣ ಪಾದಯಾತ್ರೆ ಮಾಡುವ ಮೂಲಕ ವಧು ಸಿಗಲೆಂದು ಮಾದಪ್ಪನ ಮೊರೆ ಹೋಗಿದ್ದಾರೆ.

ಈ ಸಂದರ್ಭದಲ್ಲಿ ಪಾದಯಾತ್ರೆ ಹೊರಟ ಯುವಕರು ಮಾತನಾಡಿ, ಪ್ರಸ್ತುತ ಬರಗಾಲ ಇರುವ ಹಿನ್ನೆಲೆ ಇದನ್ನು ಹೋಗಲಾಡಿಸಲು ನಾಡಿಗೆ ಉತ್ತಮ ಮಳೆ ಬೆಳೆಯಾಗಿ, ರೋಗ - ರುಜಿನ ಬರದೆ ಆರೋಗ್ಯಕರವಾಗಿರಲಿ ಎಂದು ಪ್ರಾರ್ಥನೆ ಸಲ್ಲಿಸಲು ಪಾದಯಾತ್ರೆ ಹೊರಡಲಾಗಿದೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ರೈತರು ಮತ್ತು ಕೂಲಿ ಕಾರ್ಮಿಕರ ಮಕ್ಕಳ ಮದುವೆಗೆ ಹೆಣ್ಣು ಕೊಡಲು ಸಮಾಜವು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಹೆಣ್ಣು ಸಿಗಲೆಂದು ಮಾದಪ್ಪನ ಬಳಿಗೆ ತೆರಳಿ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪಾದಯಾತ್ರೆಯಲ್ಲಿ ಕೋಡಹಳ್ಳಿ ಗ್ರಾಮದ ಯುವಕರಾದ ಜವರ, ಮಹೇಶ್, ಮಹದೇವ, ಕೆಂಪ, ನಿಲೇಶ್, ಸ್ವಾಮಿ, ಸಿದ್ದರಾಜು, ಕೃಷ್ಣ, ಮಾಧು, ಕುಮಾರ, ಪ್ರಸಾದ್ ಸೇರಿದಂತೆ 100ಕ್ಕೂ ಅಧಿಕ ನೀಲಗಾರರು ಹಾಗೂ ಮಹದೇಶ್ವರ ಗುಡ್ಡರು ಭಾಗವಹಿಸಿದ್ದಾರೆ.

ಇದನ್ನೂ ಓದಿ:ರಜಿನಿಕಾಂತ್​ಗೆ ದೇವಸ್ಥಾನ ನಿರ್ಮಿಸಿ ಮೂರ್ತಿ ಪ್ರತಿಷ್ಠಾಪಿಸಿದ ಅಭಿಮಾನಿ: ವಿಡಿಯೋ

Last Updated : Nov 14, 2023, 10:26 AM IST

ABOUT THE AUTHOR

...view details