ಕೊಳ್ಳೇಗಾಲ(ಚಾಮರಾಜನಗರ): ಮಹಿಳೆಯೋರ್ವಳಿಗೆ ತನ್ನ ಜೊತೆ ಅನೈತಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸಿ ಮಾರಣಾಂತಿಕ ಹಲ್ಲೆಗೆ ಮುಂದಾದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ತಾಲೂಕಿನ ಶಿವನಸಮುದ್ರ ಗ್ರಾಮದ ನಟರಾಜು ಬಂಧಿತ ಆರೋಪಿ. ಈತ ಅದೇ ಗ್ರಾಮದ ಮಹಿಳೆಯೊಬ್ಬಳ ಮನೆಗೆ ಜ. 7 ರಂದು ರಾತ್ರಿ 10 ಗಂಟೆ ಸಮಯದಲ್ಲಿ ಕೈಯಲ್ಲಿ ಮಚ್ಚು ಹಿಡಿದುಕೊಂಡು ಹೋಗಿ ಕೊಲೆ ಮಾಡಲು ಯತ್ನಿಸಿದ್ದಲ್ಲದೆ ಜುಟ್ಟು ಹಿಡಿದು ಎಳೆದಾಡಿ ಅವಾಚ್ಯ ಶಬ್ದದಿಂದ ನಿಂದಿಸಿದ್ದಾನೆ. ಅಲ್ಲದೇ, ಆಕೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಳ್ಳುವುದಾಗಿ ತಿಳಿಸಿ, ತನ್ನನ್ನು ಬಿಟ್ಟು ಎಲ್ಲೂ ಹೋಗಬಾರದೆಂದು ಅವಾಜ್ ಹಾಕಿದ್ದ ಎನ್ನಲಾಗ್ತಿದೆ.