ಚಾಮರಾಜನಗರ:ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಬಳಿ ನಡೆದಿದೆ.
ಹೊರೆಯಾಳ ಗ್ರಾಮದ ಹೊಣಕಾರಯ್ಯ ಮೃತಪಟ್ಟವರು. ಬೈಕಿನಲ್ಲಿ ಪತ್ನಿ ಮಂಜುಳಾರೊಂದಿಗೆ ನಂಜನಗೂಡಿಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಹೊಣಕಾರಯ್ಯ ಸ್ಥಳದಲ್ಲೆ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಮಂಜುಳಾರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪರಿಚಿತ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಆದರೆ ಅಪಘಾತ ಹೇಗೆ ನಡೆಯಿತು ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.