ಕರ್ನಾಟಕ

karnataka

ETV Bharat / state

ಚಾಮರಾಜನಗರ: ಮರಕ್ಕೆ ಬೈಕ್ ಡಿಕ್ಕಿಯಾಗಿ ರೀಲ್ಸ್ ಸ್ಟಾರ್ ಸ್ಥಳದಲ್ಲೇ ಸಾವು

ರೀಲ್ಸ್ ಮೂಲಕ ಜನಪ್ರಿಯತೆ ಗಳಿಸಿದ್ದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

a-young-man-died-in-road-accident-in-chamarajanagara
ಚಾಮರಾಜನಗರ: ಮರಕ್ಕೆ ಬೈಕ್ ಡಿಕ್ಕಿಯಾಗಿ ರೀಲ್ಸ್ ಸ್ಟಾರ್ ಸ್ಥಳದಲ್ಲೇ ಸಾವು

By ETV Bharat Karnataka Team

Published : Oct 4, 2023, 9:56 AM IST

Updated : Oct 4, 2023, 1:20 PM IST

ಚಾಮರಾಜನಗರ: ಸಾಮಾಜಿಕ‌ ಜಾಲತಾಣದಲ್ಲಿ ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ. ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ಯುವಕ. ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಯುವಕ ಎಳನೀರು ಕೀಳುವ ಕೆಲಸ ಮಾಡುವ ಜೊತೆಗೆ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ. ಡ್ಯಾನ್ಸ್, ಸ್ಟಂಟ್​ಗಳನ್ನು ರೀಲ್ಸ್ ಮಾಡಿ ಜನಪ್ರಿಯತೆ ಗಳಿಸಿದ್ದ. ಯಳಂದೂರು ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಾದಾಟದಲ್ಲಿ ಆನೆ ಸಾವು:35 ವರ್ಷದ ಗಂಡು ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಕುರುಬರಹುಂಡಿ ಬಳಿಯ ಆಲದ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ನಡೆದಿತ್ತು. ಕಾಡಾನೆಯು ಮತ್ತೊಂದು ಕಾಡಾನೆಯ ಜೊತೆ ಕಾದಾಟ ನಡೆಸಿ ಮೃತಪಟ್ಟಿರುವುದಾಗಿ ಅರಣ್ಯ ಅಧಿಕಾರಿಗಳು ದೃಢಪಡಿಸಿದ್ದರು.

ಕಾಡಾನೆಯ ಕಣ್ಣಿನ ಕೆಳಭಾಗದಲ್ಲಿ ಎದುರಾಳಿ ಕಾಡಾನೆಯ ದಂತ ಚುಚ್ಚಿರುವುದು ಕಂಡು ಬಂದಿದ್ದು, ರಕ್ತಸ್ರಾವ ಹಾಗೂ ನಿತ್ರಾಣದಿಂದ ಮೃತಪಟ್ಟಿದೆ. ಎದುರಾಳಿ ಕಾಡಾನೆಯ ದಂತವು ಮೃತ ಕಾಡಾನೆಯ ಮೇಲ್ದವಡೆಯವರೆಗೆ 30 ಸೆ.ಮೀ ಆಳದವರೆಗೆ ಹೊಳಹೊಕ್ಕಿದೆ. ಇದರಿಂದ ದವಡೆಯ ಒಳಗೆ ದಂತವು ಮುರಿದಿರುವುದರಿಂದ ಕಾಡಾನೆಯು ಸಾವನ್ನಪ್ಪಿದೆ ಎಂದು ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‍ಕುಮಾರ್ ಮಾಹಿತಿ ಕೊಟ್ಟಿದ್ದರು.

ಎದುರಾಳಿ ಆನೆಯ ಮುರಿದ ದಂತದ ಭಾಗ ಹಾಗೂ ಮೃತ ಕಾಡಾನೆಯ ಎರಡು ದಂತಗಳನ್ನು ಇಲಾಖೆಯು ವಶಪಡಿಸಿಕೊಂಡು ಮೃತ ಕಾಡಾನೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕಳೆಬರವನ್ನು ನಿಯಮಾನುಸಾರ ಅರಣ್ಯ ಪ್ರದೇಶದಲ್ಲೇ ಬಿಡಲಾಗಿದೆ. ಈ ಸಂದರ್ಭದಲ್ಲಿ ಬಂಡೀಪುರ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಇಲಾಖಾ ಪಶುವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ, ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಬೈಕ್​ ಅಪಘಾತದಲ್ಲಿ ಇಬ್ಬರು ಯುವಕರು ಸಾವು:ಇತ್ತೀಚಿಗೆ ಜಿಲ್ಲೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ಬೆಂಗಳೂರು ನಗರದ ಆರ್‌.ಎಮ್.ಸಿ.ಯಾರ್ಡ್ ಬಳಿ ನಡೆದಿತ್ತು. ಮನಮೋಹನ್ (31) ಹಾಗೂ ನಿಖಿಲ್ (25) ಮೃತರು. ಸೆ.22ರ ಮುಂಜಾನೆ ಬಿಎಂಡಬ್ಲೂ (BMW) ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಅವಘಡ ಸಂಭವಿಸಿತ್ತು. ಇಬ್ಬರು ಯುವಕರು ಸ್ನೇಹಿತರೊಂದಿಗೆ ಸಂತೋಷಕೂಟ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದರು. ಈ ಸಂದರ್ಭದಲ್ಲಿ ಮಾರ್ಗಮಧ್ಯೆ ಕಳೆದುಕೊಂಡ ಬೈಕ್ ಕಂಬಕ್ಕೆ ಡಿಕ್ಕಿಯಾಗಿತ್ತು. ಇಬ್ಬರು ಬೈಕ್‌ನಿಂದ ಹಾರಿ ಕೆಲವು ಮೀಟರ್‌ಗಳಷ್ಟು ದೂರ ಬಿದ್ದಿದ್ದರು. ಪರಿಣಾಮ, ತೀವ್ರ ರಕ್ತಸ್ರಾವ ಉಂಟಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ:ಬೆಂಗಳೂರಲ್ಲಿ ಲಾರಿ - ಕಾರಿನ ಮಧ್ಯೆ ಭೀಕರ ಅಪಘಾತ: ತಾಯಿ - ಮಗು ಸಜೀವ ದಹನ, ತಂದೆ - ಮತ್ತೋರ್ವ ಮಗುವಿಗೆ ಗಂಭೀರ ಗಾಯ

Last Updated : Oct 4, 2023, 1:20 PM IST

ABOUT THE AUTHOR

...view details