ಚಾಮರಾಜನಗರ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಸಮೀಪ ನಡೆದಿದೆ.
ಖಾಸಗಿ ಬಸ್-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - bus bike accident news In chamarajanagar
ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಳ್ಳೇಗಾಲ ತಾಲೂಕಿನ ಕುಂತೂರು ಸಮೀಪ ಅಪಘಾತ ನಡೆದಿದೆ.
ಖಾಸಗಿ ಬಸ್ -ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಸತೀಶ್ (30) ಮೃತ ದುರ್ದೈವಿ. ಸತೀಶ್ ತನ್ನ ಗ್ರಾಮದಿಂದ ಬೈಕ್ನಲ್ಲಿ ಬರುತ್ತಿದ್ದಾಗ ಮೈಸೂರಿಗೆ ಹೋಗುತ್ತಿದ್ದ ಟಿ.ಎನ್.ಆರ್.ಟಿ.ಎಸ್ ಖಾಸಗಿ ಬಸ್ ನಡುವೆ ಕುಂತೂರು ಸಮೀಪ ಮುಖಾಮುಖಿ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತದ ಸ್ಥಳಕ್ಕೆ ಡಿವೈಎಸ್ಪಿ ನವೀನ್ ಕುಮಾರ್, ವೃತ್ತ ನೀರಿಕ್ಷಕ ಶ್ರೀಕಾಂತ್ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಐ ಅಶೋಕ್ ಭೇಟಿ ನೀಡಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.