ಚಾಮರಾಜನಗರ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಸಮೀಪ ನಡೆದಿದೆ.
ಕಾರು, ಬೈಕ್ ಮುಖಾಮುಖಿ ಡಿಕ್ಕಿ: ತಾಯಿ-ಮಗನ ಸ್ಥಿತಿ ಗಂಭೀರ - ಕಾರು ಅಪಘಾತ
ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಾಯಿ ಮತ್ತು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಬೈಕ್ ಅಪಘಾತ
ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದ ಶಿವು ಹಾಗೂ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡ್ಲುಪೇಟೆ- ಮೈಸೂರು ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಚಾಮರಾಜನಗರ ಮೂಲಕ ಮಡಿಕೇರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಬ್ಬರನ್ನೂ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದಾರೆ.