ಕರ್ನಾಟಕ

karnataka

ETV Bharat / state

ಬಸ್​-ಕಾರು ನಡುವೆ ಮುಖಾಮುಖಿ ಡಿಕ್ಕಿ: ಐವರಿಗೆ ಗಂಭೀರ ಗಾಯ - ಬಸ್​-ಕಾರು ನಡುವೆ ಮುಖಾಮುಖಿ ಡಿಕ್ಕಿ

ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಘಟನೆ ನಡೆದಿದೆ.

accident between car and bus in Chamarajanagar
ಬಸ್​-ಕಾರು ನಡುವೆ ಮುಖಾಮುಖಿ ಡಿಕ್ಕಿ...ಐವರಿಗೆ ಗಂಭೀರ ಗಾಯ

By

Published : Dec 1, 2020, 11:25 AM IST

ಚಾಮರಾಜನಗರ:ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಹಾಗೂ ಹನೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಐವರು ಗಂಭೀರ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರಿನ ನಾಗೇಶ್, ಗಿರೀಶ್, ಹರೀಶ್, ಪುರುಷೋತ್ತಮ ಹಾಗೂ ಸತೀಶ್ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ನಾಲ್ವರನ್ನು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನನ್ನು ಮೈಸೂರಿಗೆ ರವಾನಿಸಲಾಗಿದೆ.

ಕಾರು ಅತಿವೇಗದಿಂದ ಇದ್ದಿದ್ದರಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿದೆ ಎನ್ನಲಾಗುತ್ತಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details