ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ ಪ್ರತ್ಯೇಕ ಅಪಘಾತ: ಓರ್ವಸಾವು, ನಾಲ್ವರ ಸ್ಥಿತಿ ಗಂಭೀರ

ಪ್ರತ್ಯೇಕ ಅಪಘಾತದಲ್ಲಿ ಓರ್ವ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಚಾಮರಾಜನಗರದಲ್ಲಿ ನಡೆದಿದೆ.

Accident in chamrajnagar
ಚಾಮರಾಜನಗರದಲ್ಲಿ ಪ್ರತ್ಯೇಕ ಅಪಘಾತ: ಓರ್ವಸಾವು, ನಾಲ್ವರ ಸ್ಥಿತಿ ಗಂಭೀರ

By

Published : Jan 15, 2020, 6:49 PM IST

ಚಾಮರಾಜನಗರ: ಪ್ರತ್ಯೇಕ ಅಪಘಾತದಲ್ಲಿ ಓರ್ವ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕ್ಯಾಲಿಕೆಟ್ ಮೂಲದ ರಾಧಾಕೃಷ್ಣ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, ತಮಿಳುನಾಡಿನ ಪ್ರವಾಸಿಗರ ಟೆಂಪೋ ಟ್ರಾವೆಲ್ಲರ್​ನ ಚಕ್ರ ಸಿಡಿದು ಪಲ್ಟಿಯಾದ ಪರಿಣಾಮ 4 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಹೊರವಲಯದ ಮಾದಾಪುರ ಬಳಿ ನಡೆದಿದೆ.

ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details