ಚಾಮರಾಜನಗರ: ಜಿಲ್ಲೆಯ ಏಕೈಕ ಬಿಜೆಪಿ ಶಾಸಕ (ಗುಂಡ್ಲುಪೇಟೆ ಕ್ಷೇತ್ರ) ಸಿ.ಎಸ್. ನಿರಂಜನ್ ಕುಮಾರ್ ಅವರಿಗೆ ನಿಗಮ ಮಂಡಳಿ ಸ್ಥಾನಮಾನ ಒಲಿದು ಬಂದಿದೆ.
ಗುಂಡ್ಲುಪೇಟೆ ಶಾಸಕ ನಿರಂಜನ್ಗೆ ಒಲಿದು ಬಂತು ನಿಗಮ ಮಂಡಳಿ ಸ್ಥಾನ - Chamarajanagar District News
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಶಾಸಕ ಸಿ.ಎಸ್.ನಿರಂಜನ್ ಕುಮಾರ್
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷಗಿರಿಯನ್ನು ನೀಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಉದ್ಯಮಗಳಿಗೆ ಬೆಂಬಲ ಮತ್ತು ಪ್ರೋತ್ಸಾಹ ದೊರಕಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆ ಮೂಡಿವೆ.