ಚಾಮರಾಜನಗರ: ಇಬ್ಬರು ಗಾಂಜಾ ಮಾರಾಟಗಾರರನ್ನು ಪ್ರತ್ಯೇಕವಾಗಿ ಬಂಧಿಸಿರುವ ಘಟನೆ ಹನೂರು ತಾಲೂಕಿನ ಜಲ್ಲಿಪಾಳ್ಯದಲ್ಲಿ ನಡೆದಿದೆ.
ಚಾಮರಾಜನಗರ: ಇಬ್ಬರು ಗಾಂಜಾ ಮಾರಾಟಗಾರರ ಬಂಧನ - Detention of marijuana dealers in Chamarajanagar
ರಾಜ್ಯದಲ್ಲಿ ಗಾಂಜಾ ಪ್ರಕರಣಗಳನ್ನು ಪೊಲೀಸರು ಸಾಲು ಸಾಲಾಗಿ ಭೇದಿಸಿದ್ದಾರೆ. ಈಗ ಮತ್ತೆ ಚಾಮರಾಜನಗರ ಜಿಲ್ಲೆಯಲ್ಲಿ ಮಾದಕ ವಸ್ತು ಮಾರುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಇಬ್ಬರು ಗಾಂಜಾ ಮಾರಾಟಗಾರರ ಬಂಧನ
ಜಲ್ಲಿಪಾಳ್ಯ ಗ್ರಾಮದ ವೀರಪ್ಪನ್ (74) ಹಾಗೂ ಶೇಷುರಾಜು (52) ಬಂಧಿತರು. ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ರಾಮಾಪುರ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಮಾಲು ಸಮೇತ ಬಂಧಿಸಿದ್ದಾರೆ.
ಬಂಧಿತರಿಂದ ಅಂದಾಜು 2.16 ಲಕ್ಷ ರೂ. ಮೌಲ್ಯದ 2.6 ಕೆಜಿ ಒಣಗಿದ ಗಾಂಜಾ ವಶಪಡಿಸಿಕೊಂಡು ರಾಮಾಪುರ ಠಾಣೆ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.