ಕೊಳ್ಳೇಗಾಲ(ಚಾಮರಾಜನಗರ):ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಇಬ್ಬರ ಬಂಧನ... 3 ಟನ್ ಅಕ್ಕಿ ವಶಕ್ಕೆ - ಚಾಮರಾಜನಗರ ಸುದ್ದಿ
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನ ಅಕ್ರಮವಾಗಿ ಮಳವಳ್ಳಿಯ ಮಾಡರ್ನ್ ರೈಸ್ ಮಿಲ್ಗೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3 ಟನ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಇಬ್ಬರ ಬಂಧನ...3 ಟನ್ ಅಕ್ಕಿ ವಶಕ್ಕೆ
ಮಂಡ್ಯದ ಮಂಚೇಗೌಡ (40) ಹಾಗೂ ನಿಂಗರಾಜು (23) ಬಂಧಿತ ಆರೋಪಿಗಳು. ಮಳವಳ್ಳಿಯ ಮಾಡರ್ನ್ ರೈಸ್ ಮಿಲ್ಗೆ ಅಕ್ರಮವಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸತ್ತೇಗಾಲ ಬಳಿ ದಾಳಿ ನಡೆಸಿದ ಡಿವೈಎಸ್ಪಿ ನವೀನ್ ಕುಮಾರ್ ನೇತೃತ್ವದ ತಂಡ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತರಿಂದ 3 ಟನ್ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.