ಗುಂಡ್ಲುಪೇಟೆ:ತಾಲೂಕಿನಹೊಂಗಹಳ್ಳಿ ಗ್ರಾಮದಲ್ಲಿ ಗುರುವಾರ ಕಳ್ಳತನ ಮಾಡಲು ಯತ್ನಿಸಿದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ತಿಳಿಸಿದ್ದಾರೆ.
ಗುಂಡ್ಲುಪೇಟೆ: ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳ ಬಂಧನ - Gundlupete crime news
ಹೊಂಗಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಕೇರಳದ ಮೂಲದ ಪ್ರದೀಪ್ ಎಂಬುವರ ಮನೆಯಲ್ಲಿ ಗುರುವಾರ ರಾತ್ರಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಗಳನ್ನು ಎರಡು ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ದಿವ್ಯಾ ಸಾರಾ ಥಾಮಸ್, ಹೊಂಗಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಕೇರಳದ ಮೂಲದ ಪ್ರದೀಪ್ ಎಂಬುವರ ಮನೆಯಲ್ಲಿ ಗುರುವಾರ ರಾತ್ರಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಗಳನ್ನು ಎರಡು ಗಂಟೆಗಳಲ್ಲಿ ಬಂಧಿಸಿ, ಅವರಿಂದ ಕಳ್ಳತನಕ್ಕೆ ಬಳಸಿದ್ದ ಬೈಕ್ ಮತ್ತು ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಪಟ್ಟಣದ ಚಿಕ್ಕ ಮಾಂಸದ ಬೀದಿಯ ಸಿದ್ದನಾಯಕ, ಮೂಕಳ್ಳಿ ಕಾಲೋನಿಯ ಪರಿಶಿಷ್ಟ ಜನಾಂಗದ ಕುಮಾರ ಮತ್ತು ಪಟ್ಟಣದ ಅರಳಿ ಕಟ್ಟೆ ಬೀದಿಯ ರಂಗಸ್ವಾಮಿ ಎಂಬುವರು ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದವರು. ಸಿದ್ದು ಎಂಬುವನು ಈ ಹಿಂದೆ ಮನೆ ಕಳ್ಳತನ ಪ್ರಕರಣದಲ್ಲಿ ಅಪರಾಧಿಯಾಗಿರುವುದಾಗಿ ತಿಳಿಸಿದರು.