ಚಾಮರಾಜನಗರ:ಬಹಿರ್ದೆಸೆಗೆ ತೆರಳಿದ್ದ 12 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಮತ್ತು ಸತ್ರ ನ್ಯಾಯಾಧಿಶರಾದ ಸದಾಶಿವ ಎಸ್.ಸುಲ್ತಾನ್ ಪುರಿ ಆದೇಶ ನೀಡಿದ್ದಾರೆ.
ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದ ಯೋಗೇಶ್ ಅಲಿಯಾಸ್ ಯೋಗಿ ಶಿಕ್ಷೆಗೊಳಗಾದ ಅಪರಾಧಿ. ಇನ್ನು ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಸೂಚಿಸಿದ್ದಾರೆ.
ಓದಿ-ಗೋ ಹತ್ಯೆ ನಿಷೇಧ ಕಾಯ್ದೆ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ!