ಗುಂಡ್ಲುಪೇಟೆ:ತಾಲೂಕಿನ ವಿವಿಧ ಗ್ರಾಮಗಳಿಗೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಭೇಟಿ ನೀಡಿ ಕೊರೊನಾ ವೈರಸ್ ಬಗ್ಗೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಿದರು.
ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಶಾಸಕರ ಭೇಟಿ: ಕೊರೊನಾ ಬಗ್ಗೆ ಜಾಗೃತಿ - MLA .C.S Niranjan Kumar latest news
ಕೊರೊನಾ ಸೋಂಕಿನ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದರಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು.
ಕೊರೊನಾ ಬಗ್ಗೆ ಜಾಗೃತಿ: ಗುಂಡ್ಲುಪೇಟೆಯ ವಿವಿಧ ಗ್ರಾಮಗಳಿಗೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಭೇಟಿ
ತಾಲೂಕಿನ ಪರಮಾಪುರ, ಮೂಡುಗೂರು, ಲಕ್ಕೂರು ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಕೊರೊನಾ ಸೋಂಕಿನ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದರಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಅಲ್ಲದೇ ಮೂಡುಗೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಕಾರ್ಯಕರ್ತೆಯರಿಂದ ಮಕ್ಕಳಿಗೆ ವಿತರಿಸುವ ಪಡಿತರದ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ತೆರಕಣಾಂಬಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೊರೊನಾ ಮುಂಜಾಗೃತಾ ಕ್ರಮಗಳ ಬಗ್ಗೆ ಮಾಹಿತಿ ಕಲೆಹಾಕಿದರು.