ಕರ್ನಾಟಕ

karnataka

ETV Bharat / state

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ನಿವೃತ್ತ ನ್ಯಾ. ಬಿ ಎ ಪಾಟೀಲ್ ಭೇಟಿ, ಕಡತ ಪರಿಶೀಲನೆ! - B A Patil visits chamarajanagara district hopsital

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆ್ಯಕ್ಸಿಜನ್ ಪ್ಲಾಂಟ್, ಸಿಲಿಂಡರ್ ವ್ಯವಸ್ಥೆ, ಸಿಸಿಟಿವಿ ಪರಿಶೀಲನೆ ಮಾಡಿದ ನಿವೃತ್ತ ನ್ಯಾಯಮೂರ್ತಿ ಬಿ.ಎ‌‌.ಪಾಟೀಲ್ ಅವರು, ಎಲ್ಲಾ ಮಾಹಿತಿಗಳನ್ನು ತಮ್ಮ ಡೈರಿಯಲ್ಲಿ ಬರೆದುಕೊಂಡಿದ್ದಾರೆ..

b-a-patil-visits-to-district-hopsital-of-chamarajanagara
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ನಿವೃತ್ತ ನ್ಯಾಯಮೂರ್ತಿ ಬಿ ಎ ಪಾಟೀಲ್ ಭೇಟಿ

By

Published : May 31, 2021, 4:10 PM IST

ಚಾಮರಾಜನಗರ : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆ್ಯಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಸರ್ಕಾರ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಬಿ.ಎ‌‌.ಪಾಟೀಲ್ ಇಂದು ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲವರನ್ನು ವಿಚಾರಣೆಗೊಳಪಡಿಸಿದರು.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ನಿವೃತ್ತ ನ್ಯಾಯಮೂರ್ತಿ ಬಿ ಎ ಪಾಟೀಲ್ ಭೇಟಿ

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಡಿಹೆಚ್ಒ ರವಿ, ಮೆಡಿಕಲ್ ಕಾಲೇಜಿನ ಡೀನ್ ಸಂಜೀವ್ ಕುಮಾರ್ ಹಾಗೂ ಜಿಲ್ಲಾಸ್ಪತ್ರೆಯ ವೈದ್ಯರನ್ನು ವಿಚಾರಣೆಗೊಳಪಡಿಸಿದ ಅವರು, ದುರಂತಕ್ಕೆ ಸಂಬಂಧಿಸಿದ ಹಲವು ಮಾಹಿತಿಗಳನ್ನು ಪಡೆದರು.

ಚಾಮರಾಜನಗರ ಜಿಲ್ಲಾಸ್ಪತ್ರೆ, ಆ್ಯಕ್ಸಿಜನ್ ಪ್ಲಾಂಟ್ ಹಾಗೂ ಸಿಲಿಂಡರ್ಗಳ ವ್ಯವಸ್ಥೆ, ಸಿಸಿಟಿವಿ ಪರಿಶೀಲನೆ ಮಾಡಿದ ಅವರು, ಎಲ್ಲಾ ಮಾಹಿತಿಗಳನ್ನು ತಮ್ಮ ಡೈರಿಯಲ್ಲಿ ಬರೆದುಕೊಂಡರು.

ನಿವೃತ್ತ ನ್ಯಾ. ಬಿ. ಎ ಪಾಟೀಲ್ ಅವರೊಂದಿಗೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾಶಿವ ಸುಲ್ತಾನ್ ಪುರಿ ಇದ್ದರು. ಸದ್ಯಕ್ಕೆ ಈಗ ಆ್ಯಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಂದು ತನಿಖೆ ನಡೆಯುತ್ತಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.

ಓದಿ:ಲಾಕ್​ಡೌನ್ ವಿಸ್ತರಣೆ : ತಜ್ಞರ ವರದಿ ಆಧರಿಸಿ ಕ್ರಮ ಎಂದ ಸಚಿವ ಆರ್. ಅಶೋಕ್

ABOUT THE AUTHOR

...view details