ಚಾಮರಾಜನಗರ:ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ವಿವಾದ ಜಿಲ್ಲೆಗೂ ಕಾಲಿಟ್ಟಿದೆ. ಸೋಮವಾರ ಹಾಗೂ ಮಂಗಳವಾರ ನಡೆಯುವ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಚಾಮರಾಜನಗರದ ಗೋಪಾಲಸ್ವಾಮಿ ಜಾತ್ರೆಗೂ ಕಾಲಿಟ್ಟ ವ್ಯಾಪಾರ ನಿರ್ಬಂಧ ವಿವಾದ - ಗೋಪಾಲಸ್ವಾಮಿ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲು ಒತ್ತಾಯ
ಚಾಮರಾಜನಗರದ ಗೋಪಾಲಸ್ವಾಮಿ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರುವುವಂತೆ ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಇಂದು ತಹಶೀಲ್ದಾರ್ ರವಿಶಂಕರ್ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ನಿರ್ದೇಶಕ ರಮೇಶ್ ಅವರಿಗೆ ಬಜರಂಗದಳ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದ್ದಾರೆ. ಹಿಮವದ್ ಗೋಪಾಲಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಅನ್ಯ ಧರ್ಮೀಯರಿಗೆ ಅಂಗಡಿ ಹಾಕಲು ಅವಕಾಶ ಕೊಡಬಾರದು. ಬೆಟ್ಟದ ತಪ್ಪಲಿನಲ್ಲಿರುವ ಅನ್ಯಧರ್ಮೀಯರ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ಇನ್ನು, ಅನ್ಯಕೋಮಿನ ವ್ಯಕ್ತಿಗಳ ವ್ಯಾಪಾರ-ವಹಿವಾಟು ನಿರ್ಬಂಧಿಸುವ ಸಂಬಂಧ ಯಾವುದೇ ಆದೇಶ ಹೊರಬಿದ್ದಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಚಾಮುಂಡಿ ಬೆಟ್ಟದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಪರವಾನಗಿ ರದ್ದುಪಡಿಸಿ: ವಿಹೆಚ್‌ಪಿ ಒತ್ತಾಯ