ಕರ್ನಾಟಕ

karnataka

ETV Bharat / state

ಕೊರೊನಾ ಮುಂಜಾಗ್ರತೆ: ಪ್ರಸಿದ್ಧ ಚಿಕ್ಕಲ್ಲೂರು ಜಾತ್ರಾ ಮಹೋತ್ಸವಕ್ಕೆ ಬ್ರೇಕ್ - banned public entry

ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ಜ.28 ರಿಂದ ಫೆ.1 ರವರೆಗೆ ನಡೆಯಬೇಕಿದ್ದ ಸಿದ್ದಾಪ್ಪಾಜಿ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸಲು ಮತ್ತು ಈ ಜಾತ್ರಾ ಮಹೋತ್ಸವಕ್ಕೆ ಭಕ್ತಾಧಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸದಿರಲು ಜಿಲ್ಲಾಡಳಿತ ತೀರ್ಮಾನಿಸಿದೆ.

banned public entry in Chikkallur fair
ಚಿಕ್ಕಲ್ಲೂರು ಜಾತ್ರಾ ಮಹೋತ್ಸವಕ್ಕೆ ಬ್ರೇಕ್

By

Published : Jan 14, 2021, 9:44 AM IST

ಚಾಮರಾಜನಗರ: ಪಂಕ್ತಿ ಸೇವೆ, ಮಾಂಸದೂಟ, ಭಕ್ತಿ ಪರಾಕಾಷ್ಠೆ ಮೂಲಕ ರಾಜ್ಯದ ಗಮನ ಸೆಳೆಯುವ ಚಿಕ್ಕಲ್ಲೂರು ಜಾತ್ರೆಗೆ ಈ ಬಾರಿ ಕೊರೊನಾ ಅಡ್ಡಿಯಾಗಿದ್ದು, ಜಾತ್ರಾ ಮಹೋತ್ಸವಕ್ಕೆ ಬ್ರೇಕ್ ಬಿದ್ದಿದೆ.

ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ಜ.28 ರಿಂದ ಫೆ.1 ರವರೆಗೆ ನಡೆಯಬೇಕಿದ್ದ ಸಿದ್ದಾಪ್ಪಾಜಿ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸಲು ಮತ್ತು ಈ ಜಾತ್ರಾ ಮಹೋತ್ಸವಕ್ಕೆ ಭಕ್ತಾಧಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸದಿರಲು ಜಿಲ್ಲಾಡಳಿತ ತೀರ್ಮಾನಿಸಿದೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸ ಆರ್.ನರೇಂದ್ರ, ಎನ್.ಮಹೇಶ್, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರ ಸಮ್ಮುಖದಲ್ಲಿ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಬಾರಿ ಜ. 28 ರಿಂದ ಫೆ.1ರವರೆಗೆ ನಡೆಯಬೇಕಿದ್ದ ಸಿದ್ದಾಪ್ಪಾಜಿ ಜಾತ್ರಾ ಮಹೋತ್ಸವು ಕೋವಿಡ್-19ರ ನಿಯಮ ಪ್ರಕಾರ ಅತ್ಯಂತ ಸರಳವಾಗಿ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವ ಕುರಿತ ಸಾಂಪ್ರದಾಯಿಕ ಪೂಜಾ ಕೈಂಕರ್ಯ ವಿಶೇಷ ಸೇವೆಗಳನ್ನು ಸ್ಥಳೀಯ ಸಿದ್ದಾಪ್ಪಾಜಿ ದೇವಸ್ಥಾನದ ಟ್ರಸ್ಟ್ ಹಾಗೂ ಮಠಗಳಿಗೆ ಸೇರಿದ ಗರಿಷ್ಠ 100 ಮಂದಿ ಪಾಲ್ಗೊಂಡು ನೆರವೇರಿಸಬೇಕೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಓದಿ:ಮುತ್ತತ್ತಿರಾಯನಿಗೆ ಸೇವೆ... ಚಿಕ್ಕಲ್ಲೂರು ಜಾತ್ರೆಗೆ ತೆರೆ

ಹೈಕೋರ್ಟ್ ನಿರ್ದೇಶನದಂತೆ ದೇವರ ಹೆಸರಿನಲ್ಲಿ ಪ್ರಾಣಿಗಳನ್ನು ಬಲಿ ಕೊಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಈ ಬಗ್ಗೆ ಕಟ್ಟುನಿಟ್ಟಿನ ನಿಗಾ ಕ್ರಮಗಳು ಮುಂದುವರೆಸುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು. ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಈ ಬಾರಿಯ ಚಿಕ್ಕಲ್ಲೂರು ಕ್ಷೇತ್ರಕ್ಕೆ ಜ.28 ರಿಂದ ಫೆ.1 ರವರೆಗೆ ಯಾವುದೇ ಭಕ್ತಾಧಿಗಳು, ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ABOUT THE AUTHOR

...view details